ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಯುವತಿ ಮೇಲೆ ಗೆಳೆಯನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಮೈಕ್ರೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿ ತನ್ನ ಗೆಳತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ನಡೆದಿರುವ ಬೆನ್ನಲ್ಲೇ ಮತ್ತೊಂದು ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.