
ಬೆಂಗಳೂರು: ಜಾತಿ ಪ್ರಮಾಣ ಪತ್ರದ ನೈಜತೆ ಪರಿಶೀಲಿಸಲು ಫೋನ್ ಪೇ ಮೂಲಕ ಲಂಚ ಪಡೆದ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ(ಡಿಸಿಆರ್ಇ) ಇನ್ಸ್ಪೆಕ್ಟರ್ ಗೀತಾ ಮತ್ತು ಖಾಸಗಿ ವ್ಯಕ್ತಿ ರಿಚರ್ಡ್ ಬಂಧಿತ ಆರೋಪಿಗಳು.
ರಾಜ್ಯ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಮನೆಯ ಹಕ್ಕು ಪಡೆಯಲು ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕಿದ್ದ ಹಿನ್ನೆಲೆಯಲ್ಲಿ ದಾಖಲೆ ನೀಡುವಂತೆ ದೂರುದಾರ ಲೋಕೇಶ್ ಮನವಿ ಸಲ್ಲಿಸಿದ್ದರು. ಇದಕ್ಕಾಗಿ 25 ಸಾವಿರ ರೂ. ನೀಡುವಂತೆ ಆರೋಪಿಗಳು ಕೇಳಿದ್ದರು. ಫೋನ್ ಪೇ ಮೂಲಕ 10 ಸಾವಿರ ರೂ. ಹಾಕಿಸಿಕೊಂಡಿದ್ದರು.
ದೂರುದಾರ ಲೋಕೇಶ್ ಈ ಕುರಿತಾಗಿ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಕಾರ್ಯಾಚರಣೆ ನಡೆಸಿ ಲಂಚ ಪಡೆದಿದ್ದ ಇಬ್ಬರನ್ನು ಬಂಧಿಸಲಾಗಿದೆ.