ಬಳ್ಳಾರಿ : ಬಳ್ಳಾರಿಯಲ್ಲಿ ಅನುಮಾನಾಸ್ಪದವಾಗಿ ರಾಜಸ್ಥಾನದ ಮೂಲದ ದಂಪತಿ ಸಾವನ್ನಪ್ಪಿದ್ದಾರೆ. ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬಳ್ಳಾರಿ ನಗರದ ಗ್ಲಾಸ್ ಬಜಾರ್ ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಶಂಕರರಾಮ್ (40) ಶಾಂತಿದೇವಿ (30) ಎಂದು ಗುರುತಿಸಲಾಗಿದೆ.
ದಂಪತಿಯ ನಡುವೆ ಆಗಾಗ್ಗೆ ಸಣ್ಣಪುಟ್ಟ ಗಲಾಟೆ ನಡೆಯುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಶಂಕರರಾಮ್ ಜೀನ್ಸ್ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.