
ಬೆಳಗಾವಿ: ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಸ್ ಕಂಡಕ್ಟರ್ ಮೇಲೆಯೇ ಪೋಕ್ಸೋ ಕೇಸ್ ದಾಖಲಾಗಿದೆ.
ಹಲ್ಲೆಗೊಳಗಾದ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿ ಮೇಲೆ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಬಸ್ ನಲ್ಲಿಯೇ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿದ ಆರೋಪದಲ್ಲಿ ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.