
ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲೀಂರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರರ್ ನೀಡಿರುವ ದೂರಿನ ಮೇರೆಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಫೆ.10ರಂದು ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆದಿತ್ತು. ಪ್ರಕರಣದ ಬಗ್ಗೆ ಕಿಡಿಕಾರಿದ್ದ ಪ್ರತಾಪ್ ಸಿಂಹ ಮುಸ್ಲಿಂರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.