HomeKarnatakaBREAKING: ಬಸ್ ಕಂಡಕ್ಟರ್ ಮೇಲೆ MES ಪುಂಡರ ಹಲ್ಲೆ ಖಂಡಿಸಿ ಕರವೇ ಪ್ರತಿಭಟನೆ; ರಸ್ತೆ ತಡೆ:...

BREAKING: ಬಸ್ ಕಂಡಕ್ಟರ್ ಮೇಲೆ MES ಪುಂಡರ ಹಲ್ಲೆ ಖಂಡಿಸಿ ಕರವೇ ಪ್ರತಿಭಟನೆ; ರಸ್ತೆ ತಡೆ: ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಳಗಾವಿ: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಕರವೇ ನಾರಾಣಗೌಡ ಬಣದ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ. ಬಾಗಲಕೋಟೆ-ಬೇಳಗಾವಿ ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು, ಎಂಇಎಸ್ ಪುಂಡರ ಅಣಕು ಶವ ಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಯಲ್ಲಿಯೇ ಕುಳಿತು ಧರಣಿ ನಡೆಸಿ ಎಂಇಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular