
ಬೆಂಗಳೂರು: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ವಿಮೆ ಯೋಜನೆಯಡಿ ಬೆನ್ನು ಮೂಳೆ ಸಮಸ್ಯೆ ಶಸ್ತ್ರಚಿಕಿತ್ಸೆ ವೆಚ್ಚವನ್ನು ಭರಿಸುವ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಬೆನ್ನು ಮೂಳೆ ಹಾನಿಯ ಸ್ಕೋಲಿಯೋಸಿಸ್, ಕೈಫೋಸಿಸ್, ಲಾರ್ಡೋಸಿಸ್ ಇತ್ಯಾದಿ ಕಾರ್ಯವಿಧಾನಗಳನ್ನು ಸೇರ್ಪಡೆ ಮಾಡಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮುಖಾಂತರ ಚಿಕಿತ್ಸಾ ಸೇವೆಗಳನ್ನು ಒದಗಿಸಲು ಷರತ್ತುಬದ್ಧ ಅನುಮೋದನೆ ನೀಡಲಾಗಿದೆ. ಬೆನ್ನುಮೂಳೆ ತೊಂದರೆಗೆ ಒಳಗಾದವರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ವಿಮಾ ಯೋಜನೆ ಅಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬಹುದಾಗಿದೆ.
ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆದು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜೊತೆ ನೋಂದಣಿ ಆಗಿರುವ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬಹುದು. ಇದಕ್ಕೆ 1.5 ಲಕ್ಷ ರೂಪಾಯಿ ದರ ನಿಗದಿ ಮಾಡಲಾಗಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿ 36 ಚಿಕಿತ್ಸಾ ವಿಧಾನಗಳನ್ನು ಉಚಿತವಾಗಿ ನಡೆಸಲು ಅನುಮತಿ ಇದೆ.