
ಶಿವಮೊಗ್ಗ: ಅತಿಥಿ ಶಿಕ್ಷಕರ ವೇತನ ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಸಮಸ್ಯೆಯಿಂದ ಅತಿಥಿ ಶಿಕ್ಷಕರಿಗೆ ವೇತನ ಬಿಡುಗಡೆಯಾಗುವುದು ತಡವಾಗಿದೆ. ಶೀಘ್ರವೇ ಬಾಕಿ ವೇತನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಅತಿಥಿ ಶಿಕ್ಷಕರಿಗೆ ನೀಡುವ ವೇತನ ಕಡಿಮೆ. ಅದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಅತಿಥಿ ಶಿಕ್ಷಕರು ಮತ್ತು ಬಿಸಿಯೂಟ ನೌಕರರ ವೇತನ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.