
ತುಮಕೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ವಿಚಾರದ ನಡುವೆಯೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆಯ ಮಾತುಗಳನ್ನಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಇತ್ತೀಚೆಗೆ ಕ್ಷೇತ್ರದ ಕಾರ್ಯಕರ್ತರ ಜೊತೆ ಬೆರೆಯಲು ಆಗುತ್ತಿಲ್ಲ. ನಿಮ್ಮ ಮನ್ನಸಿನ ಆಕಾಂಕ್ಷೆಯಂತೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ನೀವು ಹೇಳಿದರೆ ಗೃಹ ಸಚಿವ ಸ್ಥಾನಕ್ಕೆ ನಾನು ರಾಜೀನಾಮೆ ನೀದಲು ಸಿದ್ಧ ಎಂದು ಹೇಳಿದರು.
ಪರಮೇಶ್ವರ್ ಹೇಳಿಕೆಯಿಂದ ವಿಚಲಿತರಾದ ಕಾರ್ಯಕರ್ತರು, ರಾಜೀನಾಮೆ ಕೊಡುವುದು ಬೇಡ ಎಂದು ಕೋಗಲಾರಂಭಿಸಿದ್ದಾರೆ. ಈ ವೇಳೆ ಗೃಹ ಸಚಿವರೇ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ ಪ್ರಸಂಗವು ನಡೆಯಿತು.