alex Certify ವಿವಿಧ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಿಧ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಮಾರ್ಚ್ 2 ಮತ್ತು 4ರಂದು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ.

ಕಲ್ಯಾಣ ಕರ್ನಾಟಕ ವೃಂದದಲ್ಲಿ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರು, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮಾರ್ಚ್ 2ರಂದು ಹಾಗೂ ಬಿಬಿಎಂಪಿ ಸಹಾಯಕ ಇಂಜಿನಿಯರ್(ಸಿವಿಲ್) ಹುದ್ದೆಗಳಿಗೆ ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮಾರ್ಚ್ 4ರಂದು ನಡೆಸಲಿದೆ.

ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ್ದು, ಅರ್ಹ ಅಭ್ಯರ್ಥಿಗಳು ಪ್ರವೇಶ ಡೌನ್ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಪರೀಕ್ಷೆಗೆ ಹಾಜರಾಗುವಂತೆ ಕೆಪಿಎಸ್‌ಸಿ ಕಾರ್ಯದರ್ಶಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...