
ಮೈಸೂರು: ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಭಸ್ಮವಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ.
ಕಬ್ಬಿನ ಸೋಗು ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ಗೆ ಹೈ ಟೆನ್ಶನ್ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ನೋಡ ನೋಡುತ್ತಿದ್ದಂತೆ ರಸ್ತೆ ಮಧ್ಯೆಯಲ್ಲಿ ಕ್ಯಾಂಟರ್ ಧಗಧಗನೆ ಹೊತ್ತಿ ಉರಿದಿದೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದ ಕ್ಯಾಂಟರ್ ಚಾಲಕ ತಕ್ಷಣ ವಾಹನದಿಂದ ಇಳಿದಿದ್ದಾನೆ. ಅದೃಷ್ಟವಶಾತ್ ಕ್ಯಾಂಟರ್ ಚಾಲಕ ಬಚಾವ್ ಆಗಿದ್ದಾನೆ. ಕ್ಯಾಂಟರ್ ಸಂಪೂರ್ಣ ಸುಟ್ಟು ಕರಕಲಾಗಿದೆ.