
ಛತ್ತರ್ಪುರ: ಮುಂದಿನ 3 ವರ್ಷಗಳಲ್ಲಿ ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾನುವಾರ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ಅವರು ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಅಡಿಪಾಯ ಹಾಕಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕ್ಯಾನ್ಸರ್ ಔಷಧಿಗಳು ಅಗ್ಗವಾಗುತ್ತವೆ ಮತ್ತು ದೇಶದ ಪ್ರತಿ ಜಿಲ್ಲೆಯಲ್ಲಿ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಈ ವರ್ಷದ ಬಜೆಟ್‌ನಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡಲು ಹಲವು ಘೋಷಣೆಗಳನ್ನು ಮಾಡಲಾಗಿದೆ. ಕ್ಯಾನ್ಸರ್ ಔಷಧಿಗಳನ್ನು ಅಗ್ಗವಾಗಿಸಲು ನಿರ್ಧರಿಸಿದ್ದೇವೆ. ಮುಂದಿನ 3 ವರ್ಷಗಳಲ್ಲಿ ದೇಶದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಡೇ ಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ.