
ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳ ಪೊಲೀಸರು ದಾಳಿ ಮಾಡಿದ್ದು, ಹೊರ ರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಹೊರ ರಾಜ್ಯದ ಮಹಿಳೆಯರಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಮಹಿಳೆಯೊಬ್ಬಳು ನಗರಕ್ಕೆ ಕರೆತಂದು ಮನೆಯಲ್ಲಿ ಇರಿಸಿಕೊಂಡು ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದಳು. ಮೊಬೈಲ್ ಮೂಲಕ ಪರಿಚಿತ ಗಿರಾಕಿಗಳನ್ನು ಸಂಪರ್ಕಿಸಿ ಮನೆಗೆ ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ.