
ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಮಹಾರಾಷ್ಟ್ರ(BOM) ಸಾಲದ ಮೇಲಿನ ಬಡ್ಡಿ ದರದಲ್ಲಿ ಶೇಕಡ 0.25ರಷ್ಟು ಕಡಿತ ಮಾಡಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ರೆಪೊ ದರ ಕಡಿತಗೊಳಿಸಿದ ಬೆನ್ನಲ್ಲೇ ಅನೇಕ ಬ್ಯಾಂಕುಗಳು ಸಾಲಗಳ ಮೇಲಿನ ಬಡ್ಡಿ ದರ ಇಳಿಕೆ ಮಾಡಿವೆ. ಇದೀಗ ಬಿಒಎಂ ಬಡ್ಡಿ ದರ ಇಳಿಕೆ ಮಾಡಿದೆ. ಗೃಹ ಸಾಲದ ಮೇಲಿನ ಬಡ್ಡಿ ದರವನ್ನು ಶೇಕಡ 8.10ಕ್ಕೆ ಪರಿಷ್ಕರಿಸಲಾಗಿದ್ದು, ಇದು ಇಡೀ ಬ್ಯಾಂಕಿಂಗ್ ವಲಯದಲ್ಲಿ ಅತಿ ಕಡಿಮೆ ಬಡ್ಡಿ ದರವಾಗಿದೆ ಎಂದು ಹೇಳಲಾಗಿದೆ.
ಕಾರ್ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರವನ್ನು ಶೇಕಡ 8.45ಕ್ಕೆ ಪರಿಷ್ಕರಿಸಲಾಗಿದೆ. ರೆಪೊ ಆಧಾರಿತ ಶಿಕ್ಷಣ ಹಾಗೂ ಇತರೆ ಸಾಲದ ಬಡ್ಡಿ ದರ ಇಳಿಕೆ ಮಾಡಲಾಗಿದೆ. ಗೃಹ ಮತ್ತು ಕಾರ್ ಸಾಲದ ಮೇಲಿನ ಸಂಸ್ಕರಣಾ ಶುಲ್ಕದಲ್ಲಿ ಈಗಾಗಲೇ ವಿನಾಯಿತಿ ನೀಡಲಾಗಿದ್ದು, ಈಗ ಬಡ್ಡಿ ದರವೂ ಕಡಿತವಾಗಿದೆ. ಇದರಿಂದ ಗ್ರಾಹಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎನ್ನಲಾಗಿದೆ.