ಚಿಕ್ಕಬಳ್ಳಾಪುರ : ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಮೃತಪಟ್ಟು, ತಾಯಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಾಲಗಾನಹಳ್ಳಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಪ್ರಥ್ವಿಗರಾಜ್ (3) ಎಂದು ಗುರುತಿಸಲಾಗಿದೆ . ಗರ್ಭಿಣಿ ತಾಯಿ ಮೋನಿಕಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೋನಿಕಾ ತನ್ನ ತವರು ಮನೆ ಹಾಲಗಾನಹಳ್ಳಿಗೆ ಬಂದಿದ್ದಾಗ ಈ ಘಟನೆ ನಡೆದಿದೆ.
ನಿನ್ನೆ ಭಾನುವಾರ ಮನೆಯ ಮುಂದೆ ಇದ್ದ ತೆಂಗಿನ ಮರ ಮುರಿದು ಬಿದ್ದಿದ್ದು, ಮಗು ಮೃತಪಟ್ಟಿದೆ. , ತಾಯಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.