
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಗವಿಬೆಟ್ಟದಲ್ಲಿ ರೀಲ್ಸ್ ಮಾಡಲು ಹೋದಾಗ ಯುವಕನೊಬ್ಬ ಆಯತಪ್ಪಿ ಬೆಟ್ಟದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ.
ರಶೀದ್(18) ಗಾಯಗೊಂಡ ಯುವಕ ಎಂದು ಹೇಳಲಾಗಿದೆ. ಸ್ನೇಹಿತರೊಂದಿಗೆ ಪ್ರವಾಸಿಗರ ಆಕರ್ಷಣೀಯ ತಾಣ ಗವಿಬೆಟ್ಟಕ್ಕೆ ಬಂದಿದ್ದ ರಶೀದ್ ಗವಿಬೆಟ್ಟದ ತುದಿಯಲ್ಲಿ ರೀಲ್ಸ್ ಮಾಡುವಾಗ ಆಯತಪ್ಪಿ ನೂರು ಅಡಿ ಕೆಳಗೆ ಬಿದ್ದಿದ್ದಾನೆ. ಕೂಡಲೇ ಸ್ನೇಹಿತರು ಹಾಗೂ ಸ್ಥಳೀಯರು ಆತನ ನೆರವಿಗೆ ಧಾವಿಸಿದ್ದಾರೆ. ಪೊಲೀಸರ ನೆರವಿನೊಂದಿಗೆ ಬೆಟ್ಟದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.