ಹಾವೇರಿ : ಹಾವೇರಿಯಲ್ಲಿ ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಶಿಗ್ಗಾವಿ ತಾಲೂಕಿನ ಅತ್ತಿಗೇರಿಯಲ್ಲಿ ನಡೆದಿದೆ.
ಮೃತ ಬಾಲಕರನ್ನು ಪ್ರಜ್ವಲ್ ದೇವರಮನಿ (14) ಹಾಗೂ ಸನತ್ ರೆಡ್ಡಿ (14) ಎಂದು ಗುರುತಿಸಲಾಗಿದೆ.
ಸದ್ಯ, ಕೆರೆಯಲ್ಲಿ ಪ್ರಜ್ವಲ್ ದೇವರಮನಿ ಶವ ಪತ್ತೆಯಾಗಿದ್ದು, ಸನತ್ ಎಂಬ ಬಾಲಕನ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಬಾಲಕರು ಕೆರೆಗೆ ಈಜಲು ಹೋಗಿ ಮೃತಪಟ್ಟಿದ್ದಾರೆ.