ಬೆಳಗಾವಿ : 8 ದಿನದಲ್ಲಿ ಮೂರು ತಿಂಗಳ ‘ಗೃಹಲಕ್ಷ್ಮಿ’ ಹಣ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತದೆ ಎಂದು ನಾನು ಹೇಳಿದ್ದೆ, 2 ದಿನ ಕಳೆದಿದೆ. ಇನ್ನೂ 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬರಲಿದೆ. ಮಹಿಳೆಯರು ಚಿಂತಿಸುವ ಅಗತ್ಯವಿಲ್ಲ ಎಂದರು.
ಬಿಜೆಪಿಯವರು ಗೃಹಲಕ್ಷ್ಮಿ ಹಣ ಬರೋಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಕಿವಿ ಕೊಡಬೇಡಿ ಎಂದರು.
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುವುದು ವಿಳಂಬಾಗಿದ್ದ ಬಗ್ಗೆ ಫಲಾನುಭವಿ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಅವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, 8 ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.