ಮಂಡ್ಯ : ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ತಾಲೂಕಿನ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಸೂಸೈಡ್ ಮಾಡಿಕೊಂಡಿದ್ದು, ಪತ್ನಿ ಹಾಗೂ ತನ್ನ ಮಗಳೊಂದಿಗೆ ಮಾಸ್ತಪ್ಪ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಟೋ ಓಡಿಸಿ ಜೀವನ ನಡೆಸುತ್ತಿದ್ದ ಮಾಸ್ತಪ್ಪ ಕುಟುಂಬ ಆತ್ಮಹತ್ಯೆ ದಾರಿ ಹಿಡಿದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.