
ಹುಬ್ಬಳ್ಳಿಯಲ್ಲಿ ಸಿಲಿಂಡರ್ ನಿಂದ ಗ್ಯಾಸ್ ಲೀಕ್ ಆಗಿ ಮನೆಗೆ ಬೆಂಕಿ ತಗುಲಿದ್ದು, ಅಗ್ನಿ ಅವಘಡದಲ್ಲಿ ಮೂವರು ಗಾಯಗೊಂಡಿದ್ದಾರೆ.
ಹುಬ್ಬಳ್ಳಿಯ ಗೋಕುಲ ರಸ್ತೆಯ ಅರ್ಜುನ್ ವಿಹಾರದ ಬಳಿ ಅಗ್ನಿ ಅವಘಡ ಸಂಭವಿಸಿದೆ. ಅವಘಡದಲ್ಲಿ ರಾಜಸ್ಥಾನದ ಮೂಲದ ಮೂವರು ಗಾಯಗೊಂಡಿದ್ದಾರೆ. ಅಶೋಕ್, ಸುಭಾಷ್, ಮಂಗಿಲಾ ಗಾಯಗೊಂಡವರು ಎನ್ನಲಾಗಿದೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.