ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 17 ಮಂದಿ ಆರೋಪಿಗಳು ಇಂದು ಕೋರ್ಟ್’ಗೆ ಹಾಜರಾಗಲಿದ್ದಾರೆ.
ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಮುಂದೆ ಇಂದು ನಟ ದರ್ಶನ್ , ಪವಿತ್ರಾ ಗೌಡ ಸೇರಿ 17 ಮಂದಿ ಆರೋಪಿಗಳು ಇಂದು ಕೋರ್ಟ್’ಗೆ ಹಾಜರಾಗಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ವಿಚಾರಣೆ ಫೆ.25 ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಫೆ.25 ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿತ್ತು, ಫೆ.25 ರಂದು ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾಗಬೇಕಾಗಿದೆ ಎಂದು ಸೂಚನೆ ನೀಡಿತ್ತು,
ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿದಂತೆ 17 ಆರೋಪಿಗಳು ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಹಾಜರಾಗಲಿದ್ದಾರೆ.