ಕೊಪ್ಪಳ : ವಿಷ ಸೇವಿಸಿ ಪಡಿತರ ವಿತರಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆದಿದೆ.
ಆತ್ಮಹತ್ಯೆ ಶರಣಾದವರನ್ನು ಯಂಕಪ್ಪ ಬಂಗಿ ಎಂದು ಗುರುತಿಸಲಾಗಿದೆ. ಸುಮಾರು 20 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದ ಯಂಕಪ್ಪ ನಿನ್ನೆ ವಿಷ ಸೇವಿಸಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ .
ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿವಿಧೆಡೆ ಸುಮಾರು 20 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದ ಯಂಕಪ್ಪ ಸಾಲ ತೀರಿಸಲಾಗದೇ ಸೂಸೈಡ್ ಮಾಡಿಕೊಂಡಿದ್ದಾರೆ.