
ಧರ್ಮಪುರಿ: ಪಟಾಕಿ ಸಂಗ್ರಹಣಾ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದಿದೆ.
ಮೃತರನ್ನು ಷಣ್ಮುಗಂ, ತಿರುಮಲರ್ ಹಾಗೂ ಮಂಜು ಎಂದು ಗುರುತಿಸಲಾಗಿದೆ. ಮೃತರು ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಸ್ಫೋಟದ ಭೀಕರತೆಗೆ ಘಟಕ ಸಂಪೂರ್ಣ ಛಿದ್ರ ಛಿದ್ರಗೊಂಡಿದೆ.
ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಸರ್ಕಾರದ ಪರವಾನಿ ಪಡೆದು ಕಾರ್ಯನಿರ್ವಹಿಸುತ್ತಿರುವ ಪಟಾಕಿ ಗೋದಾಮಿನಲ್ಲಿಯೇ ಈ ದುರಂತ ಸಂಭವಿಸಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರೆದಿದೆ.