
ಬೀದರ್: ಸಾಲು ಸಾಲು ಅಪಘಾತ ಪ್ರಕರಣಗಳು ಸಂಭವಿಸಿತ್ತಿವೆ. ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವೈದರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ.
ಇಲ್ಲಿನ ಮುಸ್ತಾಪುರ್ ಟೋಲ್ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಡಾ.ನೀಲಕಂಠ ಬೋಸ್ಲೆ (50) ಮೃತ ವೈದ್ಯರು. ಔರಾದ್ ನ ಸಂತಪುರ ನಿವಾಸಿ. ತಮ್ಮದೇ ಕ್ಲಿನಿಕ್ ಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಟಿಟಿ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ವೈದ್ಯ ಡಾ.ನೀಲಕಂಠ 10-15 ಅಡಿ ದೂರ ಹಾರಿ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.