HomeKarnatakaGOOD NEWS : ಬೆಂಬಲ ಬೆಲೆ ಯೋಜನೆಯಡಿ 'ಬಿಳಿಜೋಳ' ಖರೀದಿಗೆ ರಾಜ್ಯ ಸರ್ಕಾರ ಆದೇಶ, ರೈತರಿಗೆ...

GOOD NEWS : ಬೆಂಬಲ ಬೆಲೆ ಯೋಜನೆಯಡಿ ‘ಬಿಳಿಜೋಳ’ ಖರೀದಿಗೆ ರಾಜ್ಯ ಸರ್ಕಾರ ಆದೇಶ, ರೈತರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ.

ಜಿಲ್ಲಾ ಟಾಸ್ಕ್ಪೋರ್ಸ್ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.

ರೈತಬಾ೦ಧವರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಬಿಳಿಜೋಳವನ್ನು ಮಾರಾಟ ಮಾಡದೇ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರುತ್ತೇನೆ ಎಂದು ಸಚಿವ ಶಿವಾನಂದ ಎಸ್.ಪಾಟೀಲ್ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಬಲ ಬೆಲೆ ಎಷ್ಟು?

ಹೈಬ್ರಿಡ್ ಜೋಳ ರೂ.3,371/- (ಪ್ರತಿ ಕ್ವಿಂಟಾಲ್ ಗೆ)
ಮಾಲ್ದಂಡಿ ಜೋಳ ರೂ.3,421/- (ಪ್ರತಿ ಕ್ವಿಂಟಾಲ್ಗೆ)
ಪ್ರತಿ ಎಕರೆಗೆ ನಿಗದಿಪಡಿಸಿರುವ ಪ್ರಮಾಣ : 20 ಕ್ವಿಂಟಾಲ್
ಪ್ರತಿ ರೈತರಿಂದ ಖರೀದಿ ಪ್ರಮಾಣ : 150 ಕ್ವಿಂಟಾಲ್

ಮಾರಾಟ ಹೇಗೆ?

ಫೂಟ್ಸ್ ಐ.ಡಿ. ಯೊಂದಿಗೆ ಬಯೋಮೆಟ್ರಿಕ್ ನೀಡಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿ. ಅಧಾರ್ ಜೋಡಣೆಯಾದ ಎನ್.ಸಿ.ಪಿ.ಐ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಖಾತರಿಪಡಿಸಿ. ಎಫ್.ಎ.ಕ್ಕೂ ಗುಣಮಟ್ಟದ ಬಗ್ಗೆ ಗ್ರೇಡರ್ ಪರಿಶೀಲಿಸಿ ದೃಢೀಕರಿಸಿದ ನಂತರ ಖರೀದಿ.ಮದ್ಯವರ್ತಿಗಳು ಖರೀದಿ ಕೇಂದ್ರಗಳನ್ನು ದುರ್ಬಳಕೆ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಸಲಾಗುವುದು.

ಹಣ ಪಾವತಿ ಹೇಗೆ?
ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಹಣ ನೇರವಾಗಿ ಜಮೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಉಚಿತ ದೂರವಾಣಿ ಸಂಖ್ಯೆಗೆ 1800 425 1552 ಕರೆ ಮಾಡಬಹುದಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular