
ಕೋಲಾರ: ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಬಲಿಯಾಗಿರುವ ಘಟನೆ ಕೊಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಾಕರಸನಹಳ್ಳಿಯಲ್ಲಿ ನಡೆದಿದೆ.
ಮಂಜುಳ (44) ಮೃತ ಮಹಿಳೆ. ಸಕರಸನಹಳ್ಳಿ ಗ್ರಾಮದ ಹೊರವಲಯದ ತೋಟದ ಮನೆ ಬಳಿ ಈ ಘಟನೆ ನಡೆದಿದೆ. ಮನೆಯಿಂದ ಹೊರ ಬರುತ್ತಿದ್ದಂತೆ ಒಂಇ ಸಲಗವೊಂದು ಮಹಿಳೆ ಮೇಲೆ ದಾಳಿ ನಡೆಸಿದೆ.
ಆನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೆ ಬಳಿಯೇ ನಡೆದಿರುವ ಈ ಘಟನೆಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.
ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.