1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್’ ನ ಮಾಜಿ ಸಂಸದ ಸಜ್ಜನ್ ಕುಮಾರ್ ‘ಗೆ ಜೀವಾವಧಿ ಶಿಕ್ಷೆವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
1984 ರಲ್ಲಿ ದೆಹಲಿಯಲ್ಲಿ ನಡೆದ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
1984ರ ನವೆಂಬರ್ 1ರಂದು ರಾಷ್ಟ್ರ ರಾಜಧಾನಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ಜಸ್ವಂತ್ ಸಿಂಗ್ ಮತ್ತು ಅವರ ಪುತ್ರ ತರುಣ್ಣೀಪ್ ಸಿಂಗ್ ಅವರನ್ನು ಹತ್ಯೆಗೈಯ್ಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ವಾದವನ್ನು ಆಲಿಸಿದ ದಿಲ್ಲಿಯ ರೋಸ್ ಅವೆನ್ಯೂ ನ್ಯಾಯಾಲಯದ ನ್ಯಾಯಾಧೀಶರಾದ ಕಾವೇರಿ ಬವೇಜಾ, ಸಜ್ಜನ್ ಕುಮಾರ್ ದೋಷಿ ಎಂದು ತೀರ್ಪು ನೀಡಿದ್ದರು. ಇದೀಗ ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಗಿದೆ.