ಚಿಕ್ಕಮಗಳೂರು : ಶರಣಾಗತಿಯಾಗಿದ್ದ ನಾಲ್ವರು ನಕ್ಸಲರನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕಾರ್ಕಳ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.
ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಿದ್ದ ಆರು ನಕ್ಸಲರ ಪೈಕಿ ನಾಲ್ವರು ನಕ್ಸಲರನ್ನು ತನಿಖೆ ನಡೆಸಲು ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದರು.
ಅಂತೆಯೇ ಉಡುಪಿ ಜಿಲ್ಲೆಯ ಕಾರ್ಕಳ ಜೆಎಂಎಫ್ ಸಿ ಕೋರ್ಟ್ ವನಜಾಕ್ಷಿ, ಸುಂದರಿ, ಮಂಡಗಾರು ಲತಾ, ಮಾರಪ್ಪ ಸೇರಿ ನಾಲ್ವರನ್ನು ಐದು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ 6 ನಕ್ಸಲರಾದ ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಪೊಲೀಸರಿಗೆ ಕಳೆದ ತಿಂಗಳು ಶರಣಾಗಿದ್ದರು. ನಕ್ಸಲ್ ನಾಯಕ ವಿಕ್ರಂಗೌಡ ಎನ್ ಕೌಂಟರ್ ಪ್ರಕರಣದ ಬಳಿಕ ಆತನ ಅನುಯಾಯಿಗಳಾಗಿದ್ದ ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ ನೀಡಿತ್ತು. ಶರಣಾದ ನಕ್ಸಲರಿಗೆ ಆರ್ಥಿಕ, ಸಾಮಾಜಿಕ ನೆರವು, ಕಾನೂನು ನೆರವು ನೀಡುವುದಾಗಿ ಭರವಸೆ ನೀಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ 6 ನಕ್ಸಲರು ಶರಣಾಗಲು ನಿರ್ಧರಿಸಿದ್ದರು.