
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ನಜೀರ್ ಹಾಗೂ ಭಾಸ್ಕರ್ ಬೆಳ್ಚಪಾಡ ಅಲಿಯಾಸ್ ಶಶಿ ಥೇವರ್ ಬಂಧಿತ ಆರೋಪಿಗಳು. ಈ ಇಬ್ಬರು ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಗಳು ಎನ್ನಲಾಗಿದೆ. 6 ತಿಂಗಳ ಹಿಂದೆಯೇ ಬ್ಯಾಂಕ್ ದರೋಡೆಗೆ ಸ್ಕೆಚ್ ಹಾಕಿದ್ದರು.
ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಈಗಾಗಲೇ ಮುರುಗನ್ ಡಿ, ದೇವರ್, ಯೋಶುವಾ ರಾಜೇಂದ್ರನ್, ಕಣ್ಣನ್ ಮಣಿ ಹಾಗೂ ಷಣ್ಮುಗಂ ಸುಂದರ್ ಎಂಬ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದೀಗ ಪ್ರಮುಖ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ದರೋಡೆಯಲ್ಲಿ ದೋಚಿದ್ದ 18.314 ಕೆಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಬ್ಯಾಂಕ್ ದರೋಡೆ ವೇಳೆ ಕಳ್ಳರು 11,67,044 ರೂ ದರೋಡೆ ಮಾಡಿದ್ದಾರೆ ಎನ್ನಲಾಗಿದೆ.