
ಬಾಗಲಕೋಟೆ: ಟ್ರ್ಯಾಕ್ಟರ್ ಹರಿದು ಎರಡೂವರೆ ವರ್ಷದ ಮಗು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಹಳೇಟಕ್ಕಳಕಿ ಗ್ರಾಮದಲ್ಲಿ ನಡೆದಿದೆ.
ನಿಹಾಲ್ ಮಂಡೆಪ್ಪಗೋಳ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಮೂತ್ರ ಮಾಡಲು ಹೋಗಿದ್ದಾಗ ಟ್ರ್ಯಾಕ್ಟರ್ ಹರಿದು ನಿಹಾಲ್ ಮೃತಪಟ್ಟಿದ್ದಾನೆ. ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.