
ಮಂಗಳೂರು: ಬೆಂಗಳೂರಿನಿಂದ ನಿಷೇಧಿತ ವಸ್ತು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಬೆಂಗಳೂರಿನಿಂದ ಬೆಂಗಳೂರಿಗೆ ಸಾಗಿಸಿ ಮಾರಾಟ ಮಾಡುತ್ತಿದ್ದ ಬಂಟ್ವಾಳದ ಸಜೀಪಮೂಡು ಗ್ರಾಮದ ಆಸೀಫ್(32) ಎಂಬುವನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯಿಂದ 1.35 ಲಕ್ಷ ರೂಪಾಯಿ ಮೌಲ್ಯದ 27 ಗ್ರಾಂ ಎಂಡಿಎಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಯಂತ್ರ ಸೇರಿದಂತೆ 1.45 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ವಿರುದ್ಧ ಈ ಹಿಂದೆ ಸುರತ್ಕಲ್, ವಿಟ್ಲ, ಬಂಟ್ವಾಳ ನಗರ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣ ದಾಖಲಾಗಿವೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ನೇತೃತ್ವದಲ್ಲಿ ಪಿಎಸ್ಐ ಶರಣಪ್ಪ ಭಂಡಾರಿ, ಎಸ್ಐ ಸುಜನ್ ಶೆಟ್ಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿ ಬಂಧಿಸಿದ್ದಾರೆ.