
ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಡಿಡಿಯುಜಿಕೆವೈ, ಜಿಲ್ಲಾ ಗ್ಯಾಂರಂಟಿ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಮಾರ್ಚ್ 1 ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಲಾಗಿದೆ.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಕೂಡಲೆ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಉದ್ಯೋಗ ಮೇಳದಲ್ಲಿ ರಾಜ್ಯದ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ನೀಡುವ ಸಲುವಾಗಿ ಭಾಗವಹಿಸಲಿವೆ. 18 ರಿಂದ 35 ವರ್ಷದ ವಯೋಮಿತಿಯ ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರುವ ನಿರುದ್ಯೋಗ ಯುವಕ-ಯುವತಿಯರು ಆನ್ ಲೈನ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಂಡು, ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ನೊಂದಣಿಗಾಗಿ ಜಿಲ್ಲಾ ಅಧಿಕೃತ ವೆಬ್‍ಸೈಟ್ ಹಾಗೂ ಜಾಹೀರಾತಿನಲ್ಲಿ ನೀಡಲಾಗಿರುವ ಗೂಗಲ್ ಫಾರ್ಮ್ ಲಿಂಕ್: https://forms.gle/7pTxbGPVKAFCSYaX7 ಹಾಗೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.