
ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಎಂದು ಖ್ಯಾತಿ ಪಡೆದಿರುವ ಮಹಾಕುಂಭ ಮೇಳಕ್ಕೆ ಮಹಾಶಿವರಾತ್ರಿಯಂದು ತೆರೆ ಬೀಳಲಿದೆ.
ಬುಧವಾರ ತ್ರಿವೇಣಿ ಸಂಗಮದಲ್ಲಿ ಕೊನೆಯ ಅಮೃತ ಸ್ನಾನ ನಡೆಯಲಿದ್ದು, ಒಂದು ಕೋಟಿಗೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ ಇದೆ. ಜನವರಿ 13ರಂದು ಶುರುವಾದ ಮಹಾ ಕುಂಭಮೇಳದಲ್ಲಿ ಈಗಾಗಲೇ 63 ಕೋಟಿಗೂ ಅಧಿಕ ಮಂದಿ ಪುಣ್ಯ ಸ್ನಾನ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.
ಮಂಗಳವಾರ ಸಂಜೆಯಿಂದಲೇ ಪ್ರಯಾಗ್ ರಾಜ್ ಗೆ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಈ ನಡುವೆ ಕುಂಭ ಮೇಳಕ್ಕೆ ಬಂದ ಭಕ್ತರು ಸುರಕ್ಷಿತವಾಗಿ ಹಿಂದಿರುಗಲು ರೈಲ್ವೆ ಇಲಾಖೆ ಪ್ರಯಾಗ್ ರಾಜ್ ನಿಂದ 350ಕ್ಕೂ ಹೆಚ್ಚು ರೈಲುಗಳ ಕಾರ್ಯಾಚರಣೆಗೆ ಕ್ರಮ ಕೈಗೊಂಡಿದೆ.