
ನವದೆಹಲಿ: ಕೋವಿಡ್- 19 ನಿಯಂತ್ರಣಕ್ಕೆ ನೀಡಲಾದ ಲಸಿಕೆಗಳಿಂದ ಅಡ್ಡ ಪರಿಣಾಮಗಳು ಉಂಟಾದಲ್ಲಿ ಅದಕ್ಕೆ ಸಂಬಂಧಿಸಿದಂತೆ ನೀತಿಯೊಂದನ್ನು ರೂಪಿಸುವ ಸಾಧ್ಯತೆಯ ಕುರಿತಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಕೋವಿಡ್ ಲಸಿಕೆಯಿಂದಾಗಿ ಸಾವು ಸೇರಿದಂತೆ ಇತರೆ ಅಡ್ಡ ಪರಿಣಾಮ ಉಂಟಾದಲ್ಲಿ ಅದಕ್ಕೆ ಪರಿಹಾರ ನೀಡಲು ಯಾವುದೇ ನೀತಿಯನ್ನು ರೂಪಿಸಿಲ್ಲ ಎಂಬುದನ್ನು ಕೋರ್ಟ್ ಗಮನಕ್ಕೆ ತರಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕೋವಿಡ್- 19 ನಿಯಂತ್ರಣ ಲಸಿಕೆ ನೀಡಿದ ನಂತರದ ಪರಿಣಾಮಗಳನ್ನು ನಿರ್ವಹಿಸಲು ಯಾವುದೇ ಉಲ್ಲೇಖವಿಲ್ಲ ಎಂದು ಕೇಂದ್ರದ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು ತಿಳಿಸಿದ್ದಾರೆ.
ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರಿದ್ದ ವಿಭಾಗೀಯ ಪೀಠ ಮಾಹಿತಿ ನೀಡಿದ ಹೆಚ್ಚುವರಿ ಸಾಲಿಸಿಟರ್ ಜನರಲ್, ಕೋವಿಡ್- 19 ಸಾಂಕ್ರಾಮಿಕವನ್ನು ವಿಪತ್ತು ಎಂದು ಘೋಷಿಸಲಾಗಿತ್ತು. ಆದರೆ, ಲಸಿಕೆ ನೀಡುವ ಅಭಿಯಾನವನ್ನು ವೈದ್ಯಕೀಯ ಶಿಷ್ಟಾಚಾರಗಳಿಗೆ ಅನುಗುಣವಾಗಿ ನಡೆಸಲಾಗಿದೆ ಎಂದು ಹೇಳಿದ್ದಾರೆ.