
ಚೆನ್ನೈ: ಅಪ್ರಾಪ್ತ ಯುವಕನೊಬ್ಬ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಆಕೆ ವಿರೋಧಿಸಿದ್ದಕ್ಕೆ ಮಗುವಿನ ಮುಖವನ್ನೇ ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾನೆ.
16 ವರ್ಷದ ಅಪ್ರಾಪ್ತ 3 ವರ್ಷದ ಬಾಲಕಿ ಮೇಲೆ ಅಟ್ಟಹಾಸ ಮೆರೆದಿದ್ದಾನೆ. ಮಗು ವಿರೋಧಿಸಿದ್ದಕ್ಕೆ ಆಕೆಯ ಮುಖವನ್ನು ವಿರೂಪಗೊಳಿಸಿದ್ದಾನೆ. ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯ ಸೀರ್ಕಾಳಿ ಪಟ್ಟಣದಲ್ಲಿ ನಡೆದಿದೆ.
ಬಾಲಕಿ ಅಂಗನವಾಡಿಯಿಂದ ಬರುತ್ತಿದ್ದ ವೇಳೆ ಚಾಕೋಲೇಟ್ ಕೊಡಿಸುವುದಾಗಿ ಹೇಳಿ ಆಕೆಯನ್ನು ಕರೆದೊಯ್ದ ದುಷ್ಟ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಚೀರಾಡುತ್ತ ವಿರೋಧಿಸಿದ್ದಕ್ಕೆ ಆಕೆಯ ಮುಖಕ್ಕೆ ಕಲ್ಲಿನಿಂದ ಜಜ್ಜಿದ್ದಾನೆ. ಬಾಲಕಿಯ ಮುಖ, ಕಣ್ಣುಗಳಿಗೆ ಗಂಭೀರ ಗಾಯಗಳಾಗಿವೆ. ಮಗು ಪ್ರಜ್ಞೆ ಕಳೆದುಕೊಂಡಿದೆ. ಬಳಿಕ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಮಗು ಮನೆಗೆ ಬಾರದಿರುವುದನ್ನು ಕಂಡು ಕಂಗಾಲಾದ ಪೋಷಕರು ಹುಡುಕುತ್ತಿದ್ದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.