
ಮೈಸೂರು: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ರಾಜವಂಶಸ್ಥ, ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಕುಟುಂಬ ಸಮೇತರಾಗಿ ತ್ರಿನೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆಸಲ್ಲಿಸಿದರು.
ಪತ್ನಿ ತ್ರಿಷಿಕಾ ಹಾಗೂ ಮಗನೊಂದಿಗೆ ಅರಮನೆ ಆವರಣದಲ್ಲಿರುವ ತ್ರಿನೇಶ್ವರದೇವಾಲಯಯಕ್ಕೆ ತೆರಳಿ ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಯದುವೀರ್ ಹಾಗೂ ತ್ರಿಷಿಕಾ ದಂಪತಿಗೆ ಶಾಲು ಹೊಡಿದ್ಸಿ ಗೌರವಿಸಲಾಯಿತು.
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ತ್ರಿನೇಶ್ವರನಿಗೆ ಚಿನ್ನದ ಮುಖವಾಡ ಧರಿಸಿ ವಿಶೇಷ ಅರ್ಚನೆ, ಪಂಚಾಮೃತ ಅಭಿಷೇಕ ನೆರವೇರಿಸಲಾಗುತ್ತಿದೆ.