
ಮಡಿಕೇರಿ: ಬಿಸಿಲ ಝಳದ ನಡುವೆಯೇ ಬೆಂಕಿ ಅವಘಡ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಅವಗಢ ಸಂಭವಿಸಿದೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಯನಾಡು ಬಳಿ ಈ ಘಟನೆ ನಡೆದಿದೆ. ಲಾರಿಯಲ್ಲಿ ಬೆಂಕಿ ಕಣಿಸಿಕೊಳ್ಳುತ್ತಿದ್ದಂತೆ ಚಾಲಕ ರಸ್ತೆ ಬದಿ ಲಾರಿ ನಿಲ್ಲಿಸಿ ಕೆಳಗಿಳಿದಿದ್ದಾರೆ. ನೋಡನೋಡುತ್ತಿದ್ದಂತೆ ಬೆಂಕಿ ಹೊತ್ತಿ ಉರಿದಿದೆ.
ಲಾರಿಯಲ್ಲಿದ್ದ 10 ಲಕ್ಷಕ್ಕೂ ಅಧಿಕ ಮೌಲ್ಯದ ಬಿಸ್ಕೆಟ್ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ. ಲಾರಿ ಬಿಡದಿಯಿಂದ ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.