alex Certify ಚುನಾವಣಾ ಶಾಖೆಯ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣಾ ಶಾಖೆಯ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಆಹ್ವಾನ

ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಅಧಿಕೃತ ವೆಬ್‍ಸೈಟ್ https://kodagu.nic.nic.in ರಲ್ಲಿ ಪಡೆದು ಭರ್ತಿ ಮಾಡಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವುದು. ಕಚೇರಿ ವಿಳಾಸ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ, ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆ, ಹುದ್ದೆಯ ಸಂಖ್ಯೆ 01, ಶೈಕ್ಷಣಿಕ ವಿದ್ಯಾರ್ಹತೆ ಬಿ.ಈ ಅಥವಾ ಬಿಟೆಕ್, ಬಿಸಿಎ, ಎಂಸಿಎ, ಕಂಪ್ಯೂಟರ್ ಸೈನ್ಸ್ ಅಥವಾ ಇನ್‍ಫಾರ್ಮೇಸನ್, ಸೈನ್ಸ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಟೆಲಿಕಾಂ, ಯಾವುದೇ ಸರ್ಕಾರಿ ಕಚೇರಿಯಲ್ಲಿ, ಕಂಪನಿ, ಸಂಸ್ಥೆಗಳಲ್ಲಿ ಕನಿಷ್ಠ 2 ವóರ್ಷಗಳ ಅನುಭವ ಹೊಂದಿರಬೇಕು. ವಯೋಮಿತಿ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷವಾಗಿರಬೇಕು. ವೇತನ ರೂ.30,053 (ಎಲ್ಲಾ ತೆರಿಗೆ ಹಾಗೂ ಇತ್ಯಾದಿ ಕಡಿತಗೊಳಿಸಿ), ಅರ್ಜಿ ಸಲ್ಲಿಸಲು ಮಾರ್ಚ್, 05 ರ ಸಂಜೆ 5.30 ಗಂಟೆ ಕೊನೆಯ ದಿನವಾಗಿದೆ.

ಭಾರತೀಯ ನಾಗರೀಕರಗಿರತಕ್ಕದ್ದು. ವಯೋಮಿತಿ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷ, ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಬಂಧ ಇರುವ ಯಾವುದೇ ದೈಹಿಕ ನ್ಯೂನ್ಯತೆಯಿಂದ ಮುಕ್ತರಾಗಿರಬೇಕು. ಅಭ್ಯರ್ಥಿಯು ಯಾವುದೇ ಕ್ರಿಮಿನಲ್ ಮೊಕದ್ದಮೆಯಲ್ಲಿ ಭಾಗಿಯಾಗಿರತಕ್ಕದ್ದಲ್ಲ. ಒಂದು ವರ್ಷಕ್ಕೆ ಮಾತ್ರ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಒಂದು ವರ್ಷದ ಸೇವೆಯನ್ನು ತೃಪ್ತಿಕರವಾಗಿ ಪೂರೈಸಿದಲ್ಲಿ ಅಗತ್ಯವಿದಲ್ಲಿ ಮಾತ್ರ ಮುಂದಿನ ವರ್ಷಕ್ಕೆ ವಿಸ್ತರಿಸಲಾಗುವುದು. ಇದನ್ನು ಅಭ್ಯರ್ಥಿಯು ಹಕ್ಕು ಎಂದು ತಿಳಿಯತಕ್ಕದ್ದಲ್ಲ.

ಅಂತಿಮ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಪೂರ್ವದಲ್ಲಿ ಯಾವುದೇ ಕಾರಣ ನೀಡದೆ ಈ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡುವ ಅಥವಾ ರದ್ದುಗೊಳಿಸುವ ಸಂಪೂರ್ಣ ಹಕ್ಕನ್ನು ಈ ಪ್ರಾಧಿಕಾರವು ಹೊಂದಿರುತ್ತದೆ. ಅಭ್ಯರ್ಥಿಯ ಸ್ವ- ವಿವರ 10ನೇ ತರಗತಿ ಅಂಕಪಟ್ಟಿ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ಎಲ್ಲಾ ಪ್ರಮಾಣ ಪತ್ರ/ ದಾಖಲೆಗಳನ್ನು, ನೇಮಕಾತಿ ಆದೇಶಗಳನ್ನು, ಅನುಭವ ಪ್ರಮಾಣ ಪತ್ರ ಹಾಗೂ ಒಂದು ಭಾವಚಿತ್ರ ಮತ್ತು ಆಧಾರ್ ಪ್ರತಿಯನ್ನು ಅರ್ಜಿಯೊಂದಿಗೆ ದೃಢೀಕರಿಸಿ ಲಗತ್ತಿಸಿ ಕೊನೆಯ ದಿನಾಂಕದೊಳಗೆ ಮುದ್ದಾಂ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸುವುದು. ನಿಗದಿಪಡಿಸಿದ ದಿನಾಂಕ ಮತ್ತು ಸಮಯದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...