
ಕಲಬುರಗಿ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಕಲಬುರಗಿಯ ಇಎಸ್ ಐ ಆಸ್ಪತ್ರೆಯಲ್ಲಿ ಬಾಣಂತಿಯೋರ್ವಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಿಲ್ಪಾ (32) ಮೃತ ಬಾಣಂತಿ. ಲೋ ಬಿಪಿಯಿಂದ ಬಳಲುತ್ತಿದ್ದ ಶಿಲ್ಪಾ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತೊನಸನಹಳ್ಳಿ ನಿವಾಸಿಯಾಗಿರುವ ಶಿಲ್ಪಾ, ಸೋಮವಾರ ಹೆರಿಗೆಗೆಂದಿ ಇಎಸೈ ಆಸ್ಪತ್ರೆಗೆ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ಬಳಿಕ ಲೋ ಬಿಪಿಯಿಂದ ಬಳಲುತ್ತಿದ್ದ ಶಿಲ್ಪಾ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.