
ಬೆಂಗಳೂರು: ಶ್ರೀ ಸಾಯಿ ಮಿನರಲ್ಸ್ ಕಂಪನಿಗೆ ಕಾನೂನು ಬಾಹಿರವಾಗಿ ಗಣಿ ಗುತ್ತಿಗೆ ಅನುಮತಿ ನೀಡಿದ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ಐಟಿ)ದ ಅಧಿಕಾರಿಗಳು ಕೇದ್ರ ಸಚಿವ ಹೆಚ್.ಡಿ.ಕುಮರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಈ ಹಿಂದೆಯೇ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ ಕೇಳಲಾಗಿತ್ತು. ದೋಷಾರೋಪ ಪಟ್ಟಿಯನ್ನು ಇಂಗ್ಲೀಷ್ ಗೆ ತರ್ಜುಮೆ ಮಾಡಲು ರಾಜ್ಯಪಾಲರು ಸೂಚಿಸಿದ್ದರು. ಅದರಂತೆ ಇಂಗ್ಲೀಷ್ ಗೆ ತರ್ಜುಮೆ ಮಾಡಲಾಗಿದೆ. ಸುಮಾರು 4500 ಪುಟಗಳ ದೋಷಾರೋಪ ಪಟ್ಟಿ ಭಾಷಂತರಿಸಲಾಗಿದ್ದು, ಅದನ್ನು ಎಸ್ಐಟಿ ಅಧಿಕಾರಿಗಳು ರಾಜಭವನಕ್ಕೆ ತಲುಪಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿದ್ದಾರೆ.
2007ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿ ನಲ್ಲಿ 550 ಎಕರೆ ಭೂಮಿಯನ್ನು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಕಾನೂನು ಬಾಹಿರವಾಗಿ ಗಣಿ ಗುತ್ತಿಗೆ ಮಂಜೂರಾತಿ ನೀಡಿದ ಆರೋಪದ ಮೇರೆಗೆ ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿತ್ತು.