ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, 6 ವರ್ಷದ ಮಗನ ಕಣ್ಣೆದುರೇ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮಮತಾ (33) ಎಂಬ ಮಹಿಳೆಯನ್ನು ಕೊಂದು ಪತಿ ಸುರೇಶ್ (40 ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು ನಂತರ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.