HomeIndiaBIG NEWS: ಚಲಿಸುತ್ತಿದ್ದ ರೈಲಿಗೆ ಹಾರಿ ಪೊಲೀಸ್ ಅಧಿಕಾರಿ ಆತ್ಮಹತ್ಯೆ

BIG NEWS: ಚಲಿಸುತ್ತಿದ್ದ ರೈಲಿಗೆ ಹಾರಿ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಪೊಲೀಸ್ ಅಧಿಕಾರಿಯೊಬ್ಬರು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತ್ರಿಶೂರ್ ನ ವಡಕ್ಕಂಚೇರಿ ಬಳಿ ನಡೆದಿದೆ.

ಮೃತರನ್ನು 52 ವರ್ಷದ ಸಿಪಿಒ ರಮೇಶ್ ಬಾಬು ಎಂದು ಗುರುತಿಸಲಾಗಿದೆ. ರಮೇಶ್ ಬಾಬು ಅವರನ್ನು ಪೊಲೀಸ್ ಕಂಟ್ರೋಲ್ ರೂಂ ಗೆ ನಿಯೋಜಿಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ತಡರಾತ್ರಿ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular