
ಮೈಸೂರು: ಮೈಸೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಬಾಯ್ಲರ್ ವೇಸ್ಟ್ ಗೆ ಆಕಸ್ಮಿಕ ಬೆಂಕಿ ತಗುಲಿದ್ದು, 10-12 ಬಾಯ್ಲರ್ ಗಳು ಧಗಧಗನೆ ಹೊತ್ತಿ ಉರಿದಿವೆ. ಘಟನಾ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.