
ಬೆಂಗಳೂರು: ಆರೋಪಿಯೊಬ್ಬ ಫಿನಾಯಿಲ್ ಕುಡಿದು ಪೊಲೀಸ್ ಠಾಣೆಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ರವಿ ಅಲಿಯಾಸ್ ರಾಬಿನ್ ಆತ್ಮಹತ್ಯೆಗೆ ಯತ್ನಿಸಿರುವ ಆರೋಪಿ. ಸರಗಳ್ಳತನ ಕೇಸ್ ನಲ್ಲಿ ಪೊಲೀಸರು ಯುವಕನನ್ನು ಬಂಧಿಸಿದ್ದರು. ನಿನ್ನೆ ರಾತ್ರಿಯಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ, ಪೊಲೀಸರು ಹೊಡೆಯುತ್ತಾರೆ ಎಂಬ ಭಯಕ್ಕೆ ಠಾಣೆಯ ಬಾತ್ ರೂಮ್ ನಲ್ಲಿದ್ದ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸ್ವಸ್ಥಗೊಂಡಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ