alex Certify BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ‘ಪ್ರತಿಜ್ಞಾವಿಧಿ ಸ್ವೀಕಾರ’ : ಸರ್ಕಾರದಿಂದ ಮಹತ್ವದ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ‘ಪ್ರತಿಜ್ಞಾವಿಧಿ ಸ್ವೀಕಾರ’ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ( ಫೆ.28) ಪ್ರತಿಜ್ಞಾವಿಧಿ ಸ್ವೀಕಾರ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಶಾಂತಿ ಹಾಗೂ ಸಹೋದರತ್ವವನ್ನು ಸಮಾಜದಲ್ಲಿ ಸಾರುವ ಹಿನ್ನೆಲೆಯಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ನಾಗರೀಕರಲ್ಲಿ ಬೆಳೆಸುವುದು ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯವಾಗಿದ್ದು, ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ನಮ್ಮ ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ (ಪರಿಚ್ಛೇದ 51A (h)). ಈ ನಿಟ್ಟಿನಲ್ಲಿ ಫೆಬ್ರವರಿ 28 ರಂದು ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಏಕಕಾಲದಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ಪ್ರತಿಜ್ಞಾವಿಧಿ ಸ್ವೀಕರಿಸಿ, ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಮೂಲಕ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಆದ್ದರಿಂದ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಈ ಪ್ರತಿಜ್ಞಾ ವಿಧಿ ಸ್ವೀಕರಿಸಲು ಕ್ರಮವಹಿಸುವಂತೆ ಈ ಮೂಲಕ ಕೋರಲಾಗಿದೆ.ಪ್ರತಿಜ್ಞಾ ವಿಧಿಯನ್ನು ದಿನಾಂಕ:28.02.2025, ಶುಕ್ರವಾರದಂದು ಪೂರ್ವಾಹ್ನ 10.30 ಕ್ಕೆ ರಾಜ್ಯಾದ್ಯಂತ ಏಕಕಾಲಕ್ಕೆ ಸ್ವೀಕರಿಸುವಂತೆ ಕೋರಲಾಗಿದೆ. (ಪ್ರತಿಜ್ಞಾ ವಿಧಿಯ ಪ್ರತಿಯನ್ನು ಇದರೊಂದಿಗೆ ಲಗತ್ತಿಸಿದೆ) ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Игра для футбольных болельщиков: найдите Только самый умный найдет ошибку на картинке за Загадка, которая запутает каждого: найдите 3 различия за Задача для