ಬೆಂಗಳೂರು : ಇದೇ 27ರಿಂದ ಬೆಂಗಳೂರಿನ ಲಲಿತ್ ಅಶೋಕ ಹೋಟೆಲ್ನಲ್ಲಿ ಮೂರು ದಿನ ಆ್ಯನಿಮೇಷನ್, ದೃಶ್ಯ ಪರಿಣಾಮಗಳು, ಗೇಮಿಂಗ್, ಕಾಮಿಕ್ಸ್ ಕುರಿತ ‘ಗೆಫೆಕ್ಸ್– 2025’ ಸಮ್ಮೇಳನ ಆಯೋಜಿಸಲಾಗಿದೆ.
ಈ ಸಮ್ಮೇಳನವು ಆ್ಯನಿಮೇಷನ್, ದೃಶ್ಯ ಪರಿಣಾಮಗಳು, ಗೇಮಿಂಗ್, ಕಾಮಿಕ್ಸ್ (ಎವಿಜಿಸಿ) ವಲಯದಲ್ಲಿ ಬೆಂಗಳೂರನ್ನು ವಿಶ್ವದ ಅಗ್ರಗಣ್ಯ ನಗರವಾಗಿ ಮಾಡುವ ದಿಸೆಯಲ್ಲಿ ಮಹತ್ವದ ಹೆಜ್ಜೆ ಆಗಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.