ಬೆಂಗಳೂರು : ಭಾರತ-ಪಾಕ್ ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸಿದ್ದ ಬುಕ್ಕಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಅನೇಕಲ್ ಜಿಲ್ಲೆಯ ಜಿಲ್ಲೆ ಜಿಗಣಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತ ಭಾರತ-ಪಾಕ್ ಕ್ರಿಕೆಟ್ ಪಂದ್ಯದ ಬೆಟ್ಟಿಂಗ್ ನಡೆಸಿದ್ದನು. ಬುಕ್ಕಸಾಗರ ನಿವಾಸದಲ್ಲಿ ಬೆಟ್ಟಿಂಗ್ ನಡೆಸಿದ್ದನು ಎಂದು ತಿಳಿದು ಬಂದಿದೆ.
ಬಂಧಿತನಿಂದ 6 ಮೊಬೈಲ್, 50 ಸಿಮ್ ಕಾರ್ಡ್ , 1.18 ಲಕ್ಷ ನಗದು ಜಪ್ತಿ ಮಾಡಿಕೊಳ್ಳಲಾಗಿದೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.