ಮಂಡ್ಯ : ಕೆಎಸ್ ಆರ್ ಟಿಸಿ ಬಸ್ (KSRTC) ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದ್ದು, ಆಘಾತಕಾರಿ ವಿಡಿಯೋ ವೈರಲ್ ಆಗಿದೆ.
ಮಂಡ್ಯದ ಮದ್ದೂರಿನಲ್ಲಿ ಈ ಘಟನೆ ನಡೆದಿದ್ದು, ತೂಬಿನಕೆರೆ ಗ್ರಾಮದ ಅರುಣ್ (23) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸುಮ್ಮನೆ ಕುಳಿತಿದ್ದ ಅರುಣ್ ಇದ್ದಕ್ಕಿದ್ದಂತೆ ಕೆಎಸ್ ಆರ್ ಟಿಸಿ ಬಸ್ ನ ಹಿಂಬದಿ ಚಕ್ರಕ್ಕೆ ತಲೆಕೊಟ್ಟು ಸೂಸೈಡ್ ಮಾಡಿಕೊಂಡಿದ್ದಾನೆ. ಮದ್ದೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆತ್ಮಹತ್ಯೆ ಎಲ್ಲದಕ್ಕೂ ಪರಿಹಾರ ಅಲ್ಲ..
WATCH VIDEO