ರಾಜ್ಯದ ಹಲವು ಕಡೆ ಚಳಿ ಕಡಿಮೆ ಆಗಿ, ಬಿಸಿಲಿನ ಧಗೆ ಆವರಿಸಿದೆ. ಬೇಸಿಗೆಯಲ್ಲಿ ಬಿಸಲಿನ ತಾಪವು ಹೆಚ್ಚಾಗಿರುವುದರಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ಅವುಗಳ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕಕು ಹೆಚ್ಚಿನ ಕಾಳಜಿ ವಹಿಸಬೇಕು.
ಬೇಸಿಗೆಯಲ್ಲಿ ಈ ಕ್ರಮ ಅನುಸರಿಸಿ
ಬಿಸಿಗಾಳಿ ಸಂದರ್ಭಗಳಲ್ಲಿ ಸಮುದಾಯ ಮಟ್ಟದಲ್ಲಿ ಅನುಸರಿಸಬೇಕಾದ ಹಾಗೂ ಅನುಸರಿಸಬಾರದ ಕ್ರಮಗಳ ಪಟ್ಟಿ
ಅನುಸರಿಸಬೇಕಾದ ಕ್ರಮಗಳು
ಸಾಧ್ಯವಾದಷ್ಟು ತಂಪಾದ ಸ್ಥಳಗಳ ಇರಿ
ನೇರ ಬಿಸಿಲು/ಬಿಸಿಗಾಳಿಗೆ ಒಡ್ಡಿಕೊಳ್ಳಬೇಡಿ
ಬಿಸಿಲಿನ ಅವಧಿಯಲ್ಲಿ ಕೊಡೆಗಳನ್ನು ಬಳಸಿ
ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬೇಡಿ
ಸಾಧ್ಯವಾದಷ್ಟು ಹತ್ತಿಯ ಉಡುಪುಗಳನ್ನು ಧರಿಸಿ
ಕಪ್ಪು /ಘಾಡ ಬಣ್ಣದ ತೆಳುವಾದ ಹಾಗೂ ಸಿಂಥಟಿಕ್ ಉಡುಪುಗಳನ್ನು ಧರಿಸಬೇಡಿ
ಹತ್ತಿಯ ಟೋಪಿಗಳನ್ನು ಬಳಸಿ
ನೇರವಾಗಿ ಬಿಸಿಲಿನ ಝಳಕ್ಕೆ ತಲೆ ಒಡ್ಡಬೇಡಿ
ಹೆಚ್ಚಿನ ಬಿಸಿಲು ಅವಧಿಯಲ್ಲಿ ವಿಶ್ರಾಂತಿ ಪಡೆಯಿರಿ
ಹೆಚ್ಚಿನ ಬಿಸಿಲು ಇರುವ ಅವಧಿಯಲ್ಲಿ ಶ್ರಮದಾಯಕ ದೈಹಿಕ ಕೆಲಸಗಳನ್ನು ಮಾಡಬೇಡಿ
ಸಾಕಷ್ಟು ನೀರು, ಮಜ್ಜಿಗೆ ಕುಡಿಯಿರಿ
ಬಿಸಿ ಚಹ, ಮದ್ಯ ಸೇವಿಸಬೇಡಿ
ವಾಸವಿರುವ ಕೋಣೆಯನ್ನು ತಂಪಾಗಿರಿಸಿ
ವಾಸವಿರುವ ಕೋಣೆಯಲ್ಲಿ ನೇರವಾಗಿ ಬಿಸಿಲು ಬೀಳುವುದನ್ನು ತಪ್ಪಿಸಿ
ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಿ
ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಲು ತಡಮಾಡಬೇಡಿ
ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಕೂಡಲೇ ಚಿಕಿತ್ಸೆ ನೀಡಿ
ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡುವುದನ್ನು ತಡಮಾಡಬೇಡಿ
ಬಿಸಿಗಾಳಿ ಸಂದರ್ಭಗಳಲ್ಲಿ ಚಹಾ, ಕಾಫಿ ಮತ್ತು ಜೇನು ಸೇವಿಸಬೇಡಿ