
ಮಂಗಳೂರು: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಗಂಗರಾಜು ಸೇರಿ ಹಲವರ ಮೇಲೆ ವಾಮಾಚಾರ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಇದೆಲ್ಲದರ ಹಿಂದೆ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ. ವಾಮಾಚಾರ ಪ್ರಕರಣದಲ್ಲಿ ಉಡುಪಿಯ ಮಹಿಳಾ ಸಬ್ ಇನ್ಸ್ ಪೆಕ್ಟರ್ ಹೆಸರು ಕೇಳಿಬಂದಿದೆ. ಈಗಾಗಲೇ ಅರೆಸ್ಟ್ ಆಗಿರುವ ರಾಮಸೇನಾ ಮುಖಂಡ ಪ್ರಸಾದ್ ಅತ್ತಾವರ್ ಪತ್ನಿಯೂ ಆಗಿರುವ ಮಹಿಳಾ ಸಬ್ ಇನ್ಸ್ ಪೆಕ್ಟರ್ ಸುಮಾ ಹೆಸರು ಕೇಳಿಬಂದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅವರು ನಾಪತ್ತೆಯಾಗಿದ್ದು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಸ್ನೇಹಮಯಿ ಗೃಷ್ಣ ಮೇಲೆ ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಕಾಳಿಕಾಂಬ ಗುಡಿಯಲ್ಲಿ ಇಬ್ಬರು ಆರೋಪಿಗಳು ವಾಮಾಚಾರ ನಡೆಸಿದ್ದರು. ಅರ್ಚಕರಿಗೂ ತಿಳಿಸದೇ ಕುರಿಗಳನ್ನು ಬಲಿ ನೀಡಿ ವಾಮಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಪ್ರಸಾದ್ ಅತ್ತಾವ್ರ್ ಸೇರಿ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.